ಬಸ್ರೂರು : ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ,ಅಭಿಯೋಗ ಇಲಾಖೆ, ಯುವ ರೆಡ್ ಕ್ರಾಸ್ ಸಂಘ , ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಸೂಸೈಟಿ ಕುಂದಾಪುರ, ಗ್ರಾಮ ಪಂಚಾಯಿತ್ ಬಸ್ರೂರು ಇವರ ಸಹಭಾಗಿತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಶ್ರೀಮತಿ ರೋಹಿಣಿ.ಡಿ ಗೌರವಾನ್ವಿತ ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಪ್ ಸಿ ನ್ಯಾಯವಾದಿ ಕುಂದಾಪುರ ಇವರು ಉದ್ಘಾಟಿಸಿ ಸಮಾಜದಲ್ಲಿ ಯುವ ಜನಾಂಗದಿಂದ ಏಡ್ಸ್ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುವ ಮೂಲಕ ಏಡ್ಸ್ ಎಂಬ ಮಾರಕ ರೋಗ ನಿಯಂತ್ರಣ ಮಾಡಲು ಸಾಧ್ಯ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ ಪ್ರೇಮಾನಂದ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಅತಿಥಿಗಳಾಗಿ ಶ್ರೀ ಹಂದಟ್ಟು ಪ್ರಮೋದ್ ಹಂದೆ ಅಧ್ಯಕ್ಷರು ವಕೀಲರ ಸಂಘ, ಶ್ರೀ ಜಯಕರ ಶೆಟ್ಟಿ ಅಧ್ಯಕ್ಷರು ರೆಡ್ ಕ್ರಾಸ್ ಸೂಸೈಟಿ ಕುಂದಾಪುರ, ಶ್ರೀ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ಪ್ರದಾನ ಕಾರ್ಯದರ್ಶಿ ವಕೀಲರ ಸಂಘ, ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ ವಿದ್ಯಾ ಆಡಳಿತ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಏಡ್ಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಬಸ್ರೂರು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಜಾಗೃತಿ ಜಾಥಾ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿ ವಹಿಸಿದ್ದರು.
ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ರಾಘವೇಂದ್ರ ಶೆಟ್ಟಿ ಸ್ವಾಗತಿಸಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ರಾಘವೇಂದ್ರ ಶೆಟ್ಟಿ ಎಸ್ ವಂದಿಸಿದರು.ಕನ್ನಡ ಉಪನ್ಯಾಸಕಿ ಮಮತಾ ನಿರೂಪಿಸಿದರು.