ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ವಕ್ಪ್ ಬೋರ್ಡ್ ಅವಾಂತರದ ಕುರಿತು ಸಮಾಲೋಚನೆ ನಡೆಸಿ, ಬಳಿಕ ಉಡುಪಿ ಜಿಲ್ಲಾಧಿ ಕಾರಿಗಳ ಕಛೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.