Home » ಕೇಂದ್ರ ಪೆಟ್ರೋಲಿಯಂ ಸಚಿವರ ಭೇಟಿ
 

ಕೇಂದ್ರ ಪೆಟ್ರೋಲಿಯಂ ಸಚಿವರ ಭೇಟಿ

ಸಮಸ್ಯೆ ಪರಿಹಾರಕ್ಕೆ ಮನವಿ

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲೆಯಲ್ಲಿ C.N.G ಗ್ಯಾಸ್ ಕೊರತೆಯಿಂದ ಬಡ ರಿಕ್ಷಾ ಚಾಲಕರು ಮತ್ತು ಇತರ C.N.G ಬಳಕೆಯ ವಾಹನ ಮಾಲೀಕರು ಪರದಾಡುವಂತಾಗಿದೆ. ದಿನಗಟ್ಟಲೆ ವಾಹನ ಸವಾರರು C.N.G ಬಂಕ್ ನೆದುರು ಪೂರೈಕೆಗಾಗಿ ನಿಲ್ಲುತ್ತಿದ್ದಾರೆ.
ಆದ್ದರಿಂದ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ, ಸಮಸ್ಯೆ ಪರಿಹರಿಸಬೇಕೆಂದು ಸಂಸದ ಕೋಟ ಸಂಸದ ರಾಘವೇಂದ್ರ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲೆಯಲ್ಲಿ 21,000 KG C.N.G ಬೇಡಿಕೆ ಇದ್ದು ಇದೀಗ 14,000 KG ಪೂರೈಕೆಯಾಗುತ್ತಿದೆ. 8 C.N.G ಬಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು ಹೆಚ್ಚುವರಿ ಬಂಕಗಳನ್ನು ಮಂಜೂರು ಮಾಡಬೇಕೆಂದು ಮತ್ತು C.N.G ಬೇಡಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಪೂರೈಸಲು ಸಂಬಂಧಿತ ಕಂಪನಿಗಳಿಗೆ ಆದೇಶ ನೀಡಬೇಕೆಂದು ಸಚಿವರಿಗೆ ಮನವರಿಕೆ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವರು ಕೂಡಲೆ ಕ್ರಮ ಜರುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. 

 

Related Articles

error: Content is protected !!