ಹೊಸದಿಲ್ಲಿ : 69ನೇ ಮಹಾ ಪರಿನಿರ್ವಾಣ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ದಿಲ್ಲಿಯ ಸಂಸತ್ ಭವನದ ಹುಲ್ಲುಹಾಸಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು. ಪ್ರತಿ ವರ್ಷ ಡಿ.6ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುಣ್ಯತಿಥಿಯ ಅಂಗವಾಗಿ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತದೆ.
ಅಂಬೇಡ್ಕರ್ ಅವರನ್ನು ಸಾಮಾಜಿಕ ನ್ಯಾಯದ ದೀಪ ಎಂದು ಕರೆದ ಪ್ರಧಾನಿ ಮೋದಿ, ಸಮಾನತೆ ಮತ್ತು ಮಾನವ ಘನತೆಗಾಗಿ ಅವರ ಹೋರಾಟವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ. ಮಹಾಪರಿನಿರ್ವಾಣ ದಿನದಂದು ನಾವು ನಮ್ಮ ಸಂವಿಧಾನ ಶಿಲ್ಪಿ ಮತ್ತು ಸಾಮಾಜಿಕ ನ್ಯಾಯದ ದೀಪವಾದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮಿಸುತ್ತೇವೆ. ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ್ದಾರೆ.