Home » ಅಂಬೇಡ್ಕರ್ ಸಮಾನತೆಗಾಗಿ ಹೋರಾಡಿದ ಮಾನವತಾವಾದಿ
 

ಅಂಬೇಡ್ಕರ್ ಸಮಾನತೆಗಾಗಿ ಹೋರಾಡಿದ ಮಾನವತಾವಾದಿ

ಸಿಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದಲ್ಲಿ ಬಸವಣ್ಣ ಬುದ್ದನ ನಂತರ ಸಮಾನತೆಗಾಗಿ ಹೋರಾಡಿದವರು ಮಾನವತಾವಾದಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧ ದ ಮುಂಭಾಗ ಇರುವ ಡಾ. ಬಿ.ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು  ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು. ಆಚರಿಸಲಾಗುತ್ತದೆ ಎಂದರು.

 

Related Articles

error: Content is protected !!