Home » ಡಾ.ಮೋಹನ್  ಭಾಗವತ್ ಮಂಗಳೂರಿಗೆ ಆಗಮನ
 

ಡಾ.ಮೋಹನ್  ಭಾಗವತ್ ಮಂಗಳೂರಿಗೆ ಆಗಮನ

ಆರ್‌ಎಸ್‌ಎಸ್ ಸರಸಂಘ ಚಾಲಕ್

by Kundapur Xpress
Spread the love

ಮಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಡಾ.ಮೋಹನ್  ಭಾಗವತ್ ಅವರು ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದು ಇಂದು (ಡಿ.7) ಕಲ್ಲಡ್ಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6.00 ಗಂಟೆಯ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್ ಭಾಗವತ್ ಅವರನ್ನು ಸಂಘದ ಪ್ರಾಂತ ಪ್ರಚಾರಕರಾದ ಗುರುಪ್ರಸಾದ್  ಪ್ರಾಂತ ಸಹ ಕಾರ್ಯವಾಹ ಪಿ.ಎಸ್. ಪ್ರಕಾಶ್ ಮತ್ತಿತರ ಹಿರಿಯರು ಆತ್ಮೀಯವಾಗಿ ಬರಮಾಡಿಕೊಂಡರು.

ಬಳಿಕ ಝಡ್ ಪ್ಲಸ್ ಭದ್ರತೆಯೊಂದಿಗೆ ಸರಸಂಘಚಾಲಕರು ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನಕ್ಕೆ ಆಗಮಿಸಿದ್ದು ಸಂಘದ ಹಿರಿಯರೊಂದಿಗೆ ಮಾತುಕತೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಮೋಹನ್ ಭಾಗವತ್ ಅವರ ಖಾಸಗಿ ಭೇಟಿ ಇದಾಗಿದ್ದು, ಇಂದು ಸಂಜೆ 5.30ಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

 

Related Articles

error: Content is protected !!