ಕುಂದಾಪುರ : ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ನಿವಾಸಿ ಸುಶೀಲಾ ಎಂಬವರು ಮನೆಯ ಕಡೆಯಿಂದ ಕುಂದಾಪುರದ ಕಡೆಗೆ ಬಸ್ ಹತ್ತಲು ರಸ್ತೆ ಬದಿಯಲ್ಲಿ ನಿಂತಿರುವಾಗ ತ್ರಾಸಿಯಿಂದ ಗಂಗೊಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸುಶೀಲಾ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಕೊಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.