Home » ಕಾಳಾವರ ಚಂಪಾ ಷಷ್ಠಿ ಮಹೋತ್ಸವ ಸಂಪನ್ನ
 

ಕಾಳಾವರ ಚಂಪಾ ಷಷ್ಠಿ ಮಹೋತ್ಸವ ಸಂಪನ್ನ

by Kundapur Xpress
Spread the love

ಕುಂದಾಪುರ : ಕರಾವಳಿ ಕರ್ನಾಟಕದ ಪ್ರಸಿದ್ಧ ಹಾಗೂ ಕಾರಣೀಕ ನಾಗ ಕೇತ್ರವಾದ ಕುಂದಾಪುರ ತಾಲೂಕಿನ ಕಾಳಾವರದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿದಾನಗಳೊಂದಿಗೆ ಸಂಪನ್ನಗೊಂಂಡಿತು 

ಸುಮಾರು 800 ವರ್ಷಕ್ಕೂ ಅಧಿಕ ಪುರಾತನ ಕ್ಷೇತ್ರವಾಗಿರುವ ಕಾಳಾವರದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ ಕ್ಷೇತ್ರ ದೇವಸ್ಥಾನದಲ್ಲಿ ಪಷ್ಠಿ ಮಹೋತ್ಸವದ ನಿಮಿತ್ತ ದೇವರಿಗೆ ಕ್ಷೇತ್ರ ಪೂಜೆ, ಪಲ್ಲಂ ಪೂಜೆ ಹಾಗೂ ವಿಶೇಷ ಪೂಜೆ ಪುನಸ್ಕಾರಗಳು, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಗಳು ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಉತ್ಸವಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ಹಣ್ಣು ಕಾಯಿ, ಹೂವು ಅರ್ಪಿಸಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಆಗಮಿಸಿದ ಭಕ್ತರ ಅನುಕೂಲಕ್ಕಾಗಿ ದೇವಸ್ಥಾನದ ವತಿಯಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಭಗತ್ ಸಿಂಗ್ ಕ್ರಾಂತಿಕಾರಿ ಬಳಗ ಕಾಳಾವರ ಮತ್ತು ಕಲ್ಕೆರೆ ಘಟಕದ ವತಿಯಿಂದ ಭಕ್ತರಿಗೆ ಉಚಿತ ಮಜ್ಜಿಗೆ ಹಾಗೂ ಷಷ್ಟಿ ಮಹೋತ್ಸವ ಬಳಗದ ವತಿಯಿಂದ ಪಾನಕ ವಿತರಣೆ ವ್ಯವಸ್ಥೆ ಮಾಡಲಾಗಿತ್ತು.

 

Related Articles

error: Content is protected !!