ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ಶ್ರೀ ಶಾರದಾ ಕಾಲೇಜು ಮಹಿಳಾ ವೇದಿಕೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೈಲ್ಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರಿಮತಿ ಸುಲೇಖಾ ಶೆಟ್ಟಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ ಜಗತ್ತನ್ನು ಸೃಷ್ಟಿಸುವ ಶಕ್ತಿ ಮಹಿಳೆಗೆ ಭಾರತದಲ್ಲಿ ವಿಶೇಷ ಗೌರವನ್ನು ನೀಡಲಾಗುತ್ತಿದೆ. ಅಲ್ಲದೆ ಕತೃತ್ವ, ನೇತೃತ್ವ ಮತ್ತು ಮಾತೃತ್ವ ಗುಣಗಳನ್ನು ಒಳಗೊಂಡಿರುವ ಮಹಿಳೆಯು ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮೂಲಕ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡುವುದರ ಮೂಲಕ ಹೆತ್ತವರಿಗೆ ಕೀರ್ತಿ ತರುವುದರ ಜೊತೆಗೆ ಉತ್ತಮ ನಾಯಕಿಯಾಗಬೇಕೆಂದರು
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಾಹಿತಿ ಆನಂದ ತೀರ್ಥ ವಿದ್ಯಾಲಯದ ಕನ್ನಡ ಶಿಕ್ಷಕಿಯಾದ ಶ್ರೀಮತಿ ಸುಮಾ ಕಿರಣ್ ಇವರನ್ನು ಗುರುತಿಸುವುದರ ಮೂಲಕ ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರಾದ ಆಶ್ರಿತಾ, ಗಾಯತ್ರಿ, ಸಿಂಧೂರ, ಅನುಷ್ಕಾ, ರಂಜಿನಿ, ಹೊತ್ತಗೆ ಹೊತ್ತು ಕೃತಿ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ವಹಿಸಿದ್ದರು ಮಹಿಳಾ ವೇದಿಕೆ ಸಂಯೋಜಕರಾದ ಶ್ರೀಮತಿ ಪ್ರಮೀಳಾ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ದೀಕ್ಷಿತಾ ಧನ್ಯವಾದ ಗೈದರು.