ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಕಾರ್ಯಗಾರ : “ಪಿಯುಸಿ ನಂತರ ಮುಂದೇನು ?”
ಪಿಯುಸಿ ನಂತರ ಸ್ಪರ್ಧಾತ್ಮಕ ಯುಗದಲ್ಲಿ ಯಾವ ಕ್ಷೇತ್ರದಲ್ಲಿ ಮುಂದೆ ಅವಕಾಶಗಳಿವೆ ಅನ್ನುವುದನ್ನು ತಿಳಿಯುವುದು ಅವಶ್ಯಕ ಎನ್ನುವ ನಿಟ್ಟಿನಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ “ಪಿಯುಸಿ ನಂತರ ಮುಂದೇನು?” ಎಂಬ ಕಾರ್ಯಾಗಾರವನ್ನು ಡಿಸೆಂಬರ್ 12 ರಂದು ಶ್ರೀಮತಿ ಶಾರದಾ ವಾಸುದೇವ ಕಿಣಿ ಕಲಾ ಭವನ ಕಟಪಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ರವರು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸಲು ಬೇಕಾದ ಸಲಹೆ ಸೂಚನೆಗಳನ್ನು ಹೇಳಿದರು.
ತ್ರಿಶಾ ಕ್ಲಾಸಸ್ ನ ಬೋಧಕರಾದ ಪ್ರೊ. ರಾಜ್ ಗಣೇಶ್ ಕಾಮತ್ ಅವರು ವಿದ್ಯಾರ್ಥಿಗಳಿಗೆ ಸಿಎ, ಸಿ ಎಸ್ ಕೋರ್ಸ್ ನ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಾರಾಯಣ್ ರಾವ್ ರವರು ಐಟಿ ಕ್ಷೇತ್ರ ಮತ್ತು ಬಿಸಿಎ ಕೋರ್ಸ್ ನ ಒಳನೋಟ ಹಾಗೂ ಪ್ರಸ್ತುತ ತಾಂತ್ರಿಕ ಯುಗದಲ್ಲಿ ಅವುಗಳ ಮಹತ್ವವನ್ನು ಹೇಳಿದರು.
ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ವಿಫ್ನೇಶ್ ಶೆಣೈ, ತ್ರಿಶಾ ಸಿಬ್ಬಂದಿ ವರ್ಗದವರು ಹಾಗೂ ಹೆತ್ತವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ನಿರೂಪಿಸಿ, ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರು ಡಾ ಅನಂತ್ ಪೈ ವಂದಿಸಿದರು.