Home » 3 ದಿನ ವಿಧಾನಮಂಡಲ ಚಳಿಗಾಲದ ಅಧಿವೇಶನ
 

3 ದಿನ ವಿಧಾನಮಂಡಲ ಚಳಿಗಾಲದ ಅಧಿವೇಶನ

by Kundapur Xpress
Spread the love

ಬೆಳಗಾವಿ : ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಸೋಮವಾರದಿಂದ ಬುಧವಾರದವರೆಗೂ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಯಲಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಸರ್ಕಾರ ಮಾಡಲಿದೆ.

ವಕ್ಪ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ರೂ. ಆಮಿಷ ಒಡ್ಡಿರುವ ಬಗ್ಗೆ ಅನ್ವರ್ ಮಾನಪ್ಪಾಡಿ ಅವರು ಕೇಂದ್ರಕ್ಕೆ ಪತ್ರ ಬರೆದಿರುವ ಬಗ್ಗೆ ಸಿಬಿಐ ತನಿಖೆ ನಡೆಸಲಿ ಎಂದು ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ ಬಗ್ಗೆಯೂ ಸದನದಲ್ಲಿ ಭಾರೀ ಚರ್ಚೆ ನಡೆಯುವ ಸಾಧ್ಯತೆಯಿದೆ.

ಹೊಸ ಶಾಸಕರಿಗೆ ಅವಕಾಶ:

ಮೊದಲ ದಿನ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಈಗಾಗಲೇ ತಿಳಿಸಿದ್ದಾರೆ. ಮಂಗಳವಾರ ಎಲ್ಲಾ ಶಾಸಕರು ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಿದ್ದು ಬುಧವಾರ ವಿಶೇಷ ಚರ್ಚೆಯಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಉತ್ತರ ನೀಡಲಿದೆ. ಈಗಾಗಲೇ ಮೇಲ್ಮನೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆ ಆರಂಭವಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಳೆಹಾನಿ ಕುರಿತ ಹೇಳಿಕೆ ಬಗ್ಗೆ ಸೋಮವಾರ ಮತ್ತಷ್ಟು ಸ್ಪಷ್ಟಿಕರಣ ನೀಡಲಿದ್ದಾರೆ.

 

Related Articles

error: Content is protected !!