ಕೌಲಾಲಂಪುರ : ಚೊಚ್ಚಲ ಆವೃತ್ತಿಯ ಅಂಡರ್ -19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಭರ್ಜರಿ ಶುಭಾರಂಭ ಮಾಡಿದೆ. ಭಾನುವಾರ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಭಾರತ 9 ವಿಕೆಟ್ ಗೆಲುವು ಸಾಧಿಸಿತು.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಭಾರತದ ಮಾರಕ ದಾಳಿಗೆ ತತ್ತರಿಸಿ 20 ಓವರ್ ಗಳಲ್ಲಿ 7 ವಿಕೆಟ್ ಗೆ 67 ರನ್ ಗಳಿಸಿತು. ಆರಂಭಿಕ ಆಟಗಾರ್ತಿ ಕೋಮಲ್ ಖಾನ್ (24), ಫಾತಿಮಾ ಖಾನ್(11) ಹೊರತುಪಡಿಸಿ ಬೇರೆ ಯಾರೂ ಎರಡಂಕಿ ಮೊತ್ತ ಗಳಿಸಲಿಲ್ಲ. ಭಾರತದ ಪರ ಸೋನಮ್ ಯಾದವ್ 4 ಓವರಲ್ಲಿ 6 ರನ್‌ಗೆ 4 ವಿಕೆಟ್ ಕಬಳಿಸಿದದರು.
ಸುಲಭ ಗುರಿಯನ್ನು ಭಾರತ ಕೇವಲ 7.5 ಓವರ್‌ಗಳಲ್ಲೇ 1 ವಿಕೆಟ್ ನಷ್ಟದಲ್ಲಿ ಬೆನ್ನತ್ತಿ ಜಯಗಳಿಸಿತು