ಬೆಂಗಳೂರು : ರಾಜ್ಯ, ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ವಿಜಯೇಂದ್ರ ಅವರ ಪ್ರಧಾನಿ ಭೇಟಿ ಸಹಜವಾಗಿಯೇ ಕುತೂಹಲ ಮೂಡಿಸಿದ್ದು, ರಾಜ್ಯದ ಬೆಳವಣಿಗೆಗಳನ್ನು ಮೋದಿ ಅವರ ಗಮನಕ್ಕೆ ತಂದಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆ. ಆದರೆ ಇದನ್ನು ಸ್ವತಃ ವಿಜಯೇಂದ್ರ ಅವರೇ ನಿರಾಕರಿಸಿದ್ದಾರೆ ಮಂಗಳವಾರ ದೆಹಲಿಗೆ ತೆರಳಿದ್ದ ಅವರು ಬುಧವಾರ ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಸುಮಾರು 15 ನಿಮಿಷಗಳ ಕಾಲ ಪಕ್ಷ ಸಂಘಟನೆ ಕುರಿತು ಮಾರ್ಗದರ್ಶನ ಪಡೆದರು