ಕುವೈತ್ : ನವ ಕುವೈತ್ ನಿರ್ಮಾಣಕ್ಕೆ ಭಾರತೀಯ ಕಾರ್ಮಿಕರ ಕೌಶಲ್ಯದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಎರಡು ದಿನಗಳ ಕುವೈತ್‌ಗೆ ಭೇಟಿಗಾಗಿ ಶನಿವಾರ ಇಲ್ಲಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು
ಬಳಿಕ ಇಲ್ಲಿನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿನ ಭಾರತೀಯ ಕಾರ್ಮಿಕರ ಕ್ಯಾಂಪ್‌ಗೆ ಭೇಟಿ ನೀಡಿ ಮಾತನಾಡಿದ ಮೋದಿ, ‘ಭಾರತದಿಂದ ಇಲ್ಲಿಗೆ ಬರಲು 4 ತಾಸು ಸಾಕು. ಆದರೆ ಭಾರತದ ಒಬ್ಬ ಪ್ರಧಾನಿ ಕುವೈತ್‌ಗೆ ಬರಲು 4 ದಶಕಗಳೇ ಬೇಕಾದವು. ನೀವೆಲ್ಲಾ ಭಾರತದ ಬೇರೆ ಬೇರೆ ಭಾಗಗಳಿಂದ ಬಂದಿದ್ದೀರ. ಆದರೆ ಎಲ್ಲರನ್ನೂ ಒಟ್ಟಾಗಿ ನೋಡಿದರೆ ‘ಮಿನಿ ಇಂಡಿಯಾ’ (ಪುಟ್ಟ ಭಾರತ) ನೋಡಿದಂತಾಗುತ್ತದೆ. ಪ್ರತಿ ವರ್ಷ ನೂರಾರು ಭಾರತೀಯರು ಕುವೈ ತ್‌ಗೆ ಬರುತ್ತಾರೆ. ಅವರೆಲ್ಲಾ ಪ್ರತಿಭೆ, ತಂತ್ರ ಜ್ಞಾನ ಹಾಗೂ ಸಂಪ್ರದಾಯಗಳ ಮೂಲಕ ಕುವೈತ್‌ಗೆ ಭಾರತೀಯತೆಯ ಬಣ್ಣ ಬಳಿದಿ ದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.