ಹುಬ್ಬಳ್ಳಿ : ಎಂಎಲ್‌ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಖಾನಾಪುರ, ಕಬ್ಬಿನ ಗದ್ದೆ ಕಡೆ ಕರೆದುಕೊಂಡು ಹೋಗುತ್ತೀರಿ. ಬೆಳಗಾವಿ ಪೊಲೀಸ್ ಕಮಿಷನರ್ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್‌ಗೆ ಕಾನೂನಿನ ಪಾಠ ಆಗಬೇಕು ಘಟನೆ ಬಗ್ಗೆ ತರಾತುರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಬೆಳಗಾವಿ ಪೊಲೀಸ್ ಕಮಿಷನರ್‌ಗೆ ಸಾಮಾನ್ಯ ಜ್ಞಾನ ಇರಬೇಕು. ಬೆಳಗಾವಿ ಕಮಿಷನರ್ ಐಪಿಎಸ್ ಆಗಲು ಅಸಮರ್ಥರು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಕಟುವಾಗಿ ಮಾತನಾಡಿದ್ದಾರೆ.