Home » ಧರ್ಮದ ಅರ್ಥ ಗೊತ್ತಿಲ್ಲದ್ದಕ್ಕೆ ದೌರ್ಜನ್ಯ
 

ಧರ್ಮದ ಅರ್ಥ ಗೊತ್ತಿಲ್ಲದ್ದಕ್ಕೆ ದೌರ್ಜನ್ಯ

ಮೋಹನ್‌ ಭಾಗವತ್

by Kundapur Xpress
Spread the love

ಅಮರಾವತಿ : ಧರ್ಮದ ಸರಿಯಾದ ಅರ್ಥ ಗೊತ್ತಿಲ್ಲದ ಕಾರಣದಿಂದಾಗಿಯೇ ಇಂದು ವಿಶ್ವದಲ್ಲಿ ಧರ್ಮದ ಹೆಸರಲ್ಲಿ ಕಿರುಕುಳ ಮತ್ತು ದೌರ್ಜನ್ಯದ ಘಟನಗಳು ನಡೆಯುತ್ತಿವೆ  ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮಹಾರಾಷ್ಟ್ರದ ಅಮರಾವತಿಯಲ್ಲಿನ ಮಹಾನುಭಾವ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗ ವತ್ ‘ಧರ್ಮ ಮಹತ್ವವಾದುದು ಮತ್ತು ಅದನ್ನು ಸರಿಯಾದ ರೀತಿಯಲ್ಲಿ ಹೇಳಿಕೊಡುವ ಅಗತ್ಯವಿದೆ. ಏಕೆಂದರೆ ಸರಿಯಾದ ರೀತಿಯಲ್ಲಿ ಧರ್ಮದ ಬಗ್ಗೆ ಹೇಳಿಕೊಡದೇ ಹೋದಲ್ಲಿ ಮತ್ತು ಧರ್ಮದ ಕುರಿತು ಪರಿಪೂರ್ಣವಲ್ಲದ ಜ್ಞಾನ ನಮ್ಮನ್ನು ಅಧರ್ಮದ ಕಡೆಗೆ ಕೊಂಡೊಯ್ಯುತ್ತದೆ.

ಇಂದು ವಿಶ್ವದಾದ್ಯಂದ ಧರ್ಮದ ಹೆಸರಲ್ಲಿ ನಡೆಯುತ್ತಿರುವ ಕಿರುಕುಳ ಮತ್ತು ದೌರ್ಜ ನ್ಯಕ್ಕೆ ಧರ್ಮದ ಕುರಿತಾದ ತಪ್ಪುಕಲ್ಪನೆ, ಅದರ ಅರ್ಥ ಗೊತ್ತಿಲ್ಲದೇ ಇರುವುದೇ ಕಾರಣ ಎಂದು ಹೇಳಿದ್ದಾರೆ. ಜೊತೆಗೆ ಧರ್ಮ ಎಂದೆಂದಿಗೂ ಇದ್ದೇ ಇರುತ್ತದೆ. ಈ ಕಾರಣಕ್ಕಾಗಿಯೇ ಅದನ್ನು ಸನಾತನ ಎಂದು ಕರೆಯಲಾಗುತ್ತದೆ. ಧರ್ಮದ ನಡವಳಿಕೆಯೇ ಧರ್ಮವನ್ನು ಕಾಪಾಡುತ್ತದೆ ಎಂದು ಭಾಗವತ್ ಹೇಳಿದ್ದಾರೆ.

 

Related Articles

error: Content is protected !!