ಕುಂದಾಪುರ : ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್ಸ್ಕೀ ಬೋಟ್ ಮಗುಚಿ ಬಿದ್ದು ಸಮುದ್ರ ಪಾಲಾಗಿದ್ದ ರೋಹಿದಾಸ್ ಎಂಬವರ ಮೃತದೇಹ ಇಂದು ಸೋಮವಾರ ಪತ್ತೆಯಾಗಿದೆ.
ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಬೋಟ್ ಮಗುಚಿ ರೋಹಿದಾಸ್ ಸಮುದ್ರಪಾಲಾಗಿದ್ದ ಈ ವೇಳೆ ಹುಡುಕಾಡಿದರೂ ರೋಹಿದಾಸ್ ದೇಹ ಪತ್ತೆಯಾಗಿರಲಿಲ್ಲ ಘಟನೆ ನಡೆದು 36 ಗಂಟೆಗಳ ಬಳಿಕ ಸಮುದ್ರ ತೀರದಲ್ಲಿ ಪತ್ತೆಯಾಗಿದೆ
ಸ್ಥಳೀಯ ಮೀನುಗಾರರು ಸೋಮವಾರ ಬೆಳಿಗ್ಗೆ ಮೀನುಗಾರಿಕೆ ತೆರಳುತ್ತಿದ್ದ ವೇಳೆ ಶವ ತೇಲುತ್ತಿರುವುದನ್ನು ಗಮನಿಸಿ, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ, ಬಳಿಕ ಮೂವರು ಸೇರಿ ಸಮುದ್ರದಲ್ಲಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದಿದ್ದಾರೆ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಶವಗಾರಕ್ಕೆ ಸಾಗಿಸಿದ್ದಾರೆ.