Home » ಮೂವರು ಖಲಿಸ್ತಾನಿ ಉಗ್ರರ ಎನ್‌ಕೌಂಟರ್
 

ಮೂವರು ಖಲಿಸ್ತಾನಿ ಉಗ್ರರ ಎನ್‌ಕೌಂಟರ್

by Kundapur Xpress
Spread the love

ಲಖನೌ : ಪಂಜಾಬ್‌ನ ಗುರುದಾಸ್ಪುರದ ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ಎಸೆದ ಆರೋಪದ ಮೇಲೆ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ

ಮೂವರು ಅಪರಾಧಿಗಳು ಮತ್ತು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡದ ನಡುವೆ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ.

ಪೊಲೀಸರು ಅವರನ್ನು ಬಂಧಿಸಲು ಪ್ರಯತ್ನಿಸಿದಾಗ, ಅಪರಾಧಿಗಳು ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಮೃತ ರನ್ನು ಗುರ್ವಿಂದರ್ ಸಿಂಗ್, ವೀರೇಂದ್ರ ಸಿಂಗ್ ಮತ್ತು ಜಸನ್ನೀತ್ ಸಿಂಗ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎಕೆ ಸರಣಿಯ ಎರಡು ರೈಫಲ್ ಗಳು ಮತ್ತು ಹಲವು  ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮೂವರು ಪಾಕಿಸ್ತಾನ ಪ್ರಾಯೋಜಿತ ಖಲಿಸ್ತಾನ್ ಜಿಂದಾಬಾದ್ ಫೋರ್ಸ್ ಸಂಘಟನೆಯ ಭಾಗವಾಗಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಈ ಭಯೋತ್ಪಾದಕ ಘಟಕವು ಪಂಜಾಬ್ ಗಡಿ ಪ್ರದೇಶಗಳಲ್ಲಿನ ಪೊಲೀಸ್ ಸಂಸ್ಥೆಗಳ ಮೇಲೆ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದೆ.

 

Related Articles

error: Content is protected !!