ಮುಂಬೈ : 26/11 ಮುಂಬೈ ದಾಳಿಯ ಆರೋಪಿ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಶುಕ್ರವಾರ ಸಾವನ್ನಪ್ಪಿದ್ದಾನೆ. ಮಕ್ಕಿ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಈತ ಹಫೀಜ್ ಸಯೀದ್‌ನ ಭಾವನಾಗಿದ್ದು ಜಮಾತ್ ಉದ್ ದಾವಾದ ಉಪ ಮುಖ್ಯಸ್ಥನಾಗಿದ್ದ
ನಿಷೇಧಕ್ಕೊಳಗಾಗಿರುವ ಈ ಜಮಾತ್ ಉದ್ ದಾವಾ ಸಂಘಟನೆಯು ಮಕ್ಕಿ ಕಳೆದ ಕೆಲ ದಿನಗಳಿಂದ ಅಸ್ವಸ್ಥನಾಗಿದ್ದು, ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಸಕ್ಕರೆ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಇತ್ತೀಚೆಗೆ ಹೇಳಿತ್ತು.
ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ರೆಹಮಾನ್ ಮಕ್ಕಿಗೆ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು 2020 ರಲ್ಲಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದಿನಿಂದಲೂ ಈತ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ.
2023ರಲ್ಲಿ ವಿಶ್ವಸಂಸ್ಥೆಯು ಈತನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.. ಅಲ್ಲದೇ ಆತನ ಆಸ್ತಿ ಮುಟ್ಟುಗೋಲು ಹಾಗೂ ಪ್ರಯಾಣ ನಿಷೇಧ ಹಾಗೂ ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಒಳಪಡಿಸಿತ್ತು. 166 ಜನರ ಸಾವಿಗೆ ಕಾರಣವಾದ 26/11 ಮುಂಬೈ ಭಯೋತ್ಪಾದಕ ದಾಳಿಗೆ ಹಣಕಾಸು ಒದಗಿಸುವಲ್ಲಿ ಮಕ್ಕಿ ಭಾಗಿಯಾಗಿದ್ದ