Home » ಕೋಟದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ
 

ಕೋಟದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

by Kundapur Xpress
Spread the love

ಕೋಟ : ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಂಘಸಂಸ್ಥೆಗಳು ಗ್ರಾಮದಲ್ಲಿ ಹುಟ್ಟಿಕೊಳ್ಳಬೇಕು ಆಗ ಮಾತ್ರ ಗ್ರಾಮದಲ್ಲಿ ಒಂದಿಷ್ಟು ಬದಲಾವಣೆಗಳು ಕಾಣಲು ಸಾಧ್ಯವಾಗುತ್ತದೆ ಎಂದು ಸಾಲಿಗ್ರಾಮ ಶ್ರೀ ಗರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ನುಡಿದರು.
ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ರೋಟರಿ ಕ್ಲಬ್ ಕುಂದಾಪುರ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ,ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಯುವಕ ಮಂಡಲ ಕೋಟ ಪಂಚವರ್ಣ ಮಹಿಳಾ ಮಂಡಲ, ಕೋಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಹಯೋಗದೊಂದಿಗೆ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ತಜ್ಞದಂತ ವೈದ್ಯರಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿವಿಧ ರೀತಿಯ ಶಿಬಿರಗಳನ್ನು ಆಯೋಜಿಸಯವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಈ ದಿಸೆಯಲ್ಲಿ ರೋಟರಿ ಹಾಗೂ ಇನ್ನಿತರ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.
ರೋಟರಿ ಕ್ಲಬ್ ಕುಂದಾಪುರ ಇದರ ಅಧ್ಯಕ್ಷ ಲಿಯಾಖಾತ್ ಆಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ,ಉಪಾಧ್ಯಕ್ಷ ಪಾಂಡು ಪೂಜಾರಿ,ಗೀತಾನಂದ ಟ್ರಸ್ಟ ಪರವಾಗಿ ಜನತಾ ವ್ಯವಸ್ಥಾಪಕ ಶ್ರೀನಿವಾಸ ಕುಂದರ, ರೋಟರಿಕ್ಲಬ್ ಕುಂದಾಪುರದ ಕಾರ್ಯದರ್ಶಿ ಸಚ್ಛಿದಾನಂದ,ಕೆ.ಎAಸಿ ಮಣಿಪಾಲದ ದಂತವಿಭಾಗದ ವೈದ್ಯೆ ಡಾ.ಶ್ರೇಯಾ,ರೋಟರಿ ಮ್ಯಾನೇಜ್ಮೆಂಟ್ ಚೇರ್ಮೆನ್ ಗಣೇಶ ಐತಾಳ,
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ ಆಚಾರ್,ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ.ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಅಧಿಕ ಮಂದಿ ಇದರ ಪ್ರಯೋಜನ ಪಡೆದುಕೊಂಡರು.ಪAಚವರ್ಣ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ವಂದಿಸಿದರು.ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು.

 

Related Articles

error: Content is protected !!