Home » ಸಾವಿಗೆ ನಾನೇ ಕಾರಣವೆಂದು ಪತ್ರ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ 
 

ಸಾವಿಗೆ ನಾನೇ ಕಾರಣವೆಂದು ಪತ್ರ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ 

by Kundapur Xpress
Spread the love

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾಲಕ್ಷ್ಮೀ ಲೇಔಟ್ ಮುನೇಶ್ವರ ಬ್ಲಾಕ್ ನಿವಾಸಿ ಅಮೃತ್ ಶಿರೂರ್(40) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಡಿ.28ರಂದು ಸಂಜೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ ಗಿರೀಶ್ ಅವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಅಮೃತ್ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದವರು. ಕಳೆದ 10 ವರ್ಷಗಳಿಂದ ಕೆಎಸ್‌ಡಿಎಲ್‌ನ ಖರೀದಿ ವಿಭಾಗದಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಮಹಾಲಕ್ಷ್ಮೀ ಲೇಔಟ್‌ನ ಮುನೇಶ್ವರ ಬ್ಲಾಕ್‌ನ ಗಿರೀಶ್ ಎಂಬುವವರ ಮಾಲೀಕತ್ವದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಡಿ.28ರಂದು ಸಂಜೆ 5 ಗಂಟೆಗೆ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಏನಿದೆ :

ಪೋಷಕರಿಗೆ ಒಳ್ಳೆಯ ಮಗನಾಗಲಿಲ್ಲ. ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರದಲ್ಲಿ ಬರೆದಿರುವುದು ಕಂಡು ಬಂದಿದೆ.

 

Related Articles

error: Content is protected !!