ಬೆಂಗಳೂರು : ಕನ್ನಡದ ಪ್ರಖ್ಯಾತ ವಾಗ್ನಿ ಹಾಸ್ಯ ಕಲಾವಿದೆ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು (67 ವರ್ಷ) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್ ಬರಗೂರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಚಿಕಿತ್ಸೆ ಫಲಿಸದೇ ಜಯಪ್ರಕಾಶ್ ಬರಗೂರು ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಂತ ಜಯಪ್ರಕಾಶ್ ಬರಗೂರು ಜಯದೇವ ಆಸ್ಪತ್ರೆಗೆ ದಾಖಲಾಗಿ ಕೆಲ ವರ್ಷಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಬಗ್ಗೆ ಸುಧಾ ಬರಗೂರು ಅವರು ವಿಕೇಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ತಾವೇ ಮಾಹಿತಿ ಹಂಚಿಕೊಂಡಿದ್ದರು.
ಅವರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಇಂದು ಕತ್ರಿಗುಪ್ಪೆಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಬಳಿ ಇರುವ ಸುಧಾ ಬರಗೂರು ಅವರ ನಿವಾಸದಲ್ಲಿಸಾರ್ವಜನಿಕರ ದರುಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.