ಬೆಂಗಳೂರು : ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ, ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದರು. ಆಡಳಿತ ರಂಗದಲ್ಲಿ ಐಎಎಸ್, ಐಪಿಎಸ್, ಐಎಫ್‌ಎಸ್, ಐಆರ್‌ಎಸ್, ಕೆಎಎಸ್ ಅಧಿ ಕಾರಿಗಳ ಜವಾಬ್ದಾರಿ ಹೆಚ್ಚು ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಒದಗಿಸದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ. ಆರ್ಥಿಕತೆ ವೇಗವಾಗಿ ಬೆಳೆದಷ್ಟೂ ಅದು ಎಲ್ಲರಿಗೂ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಅಸಮಾನತೆ ಹೆಚ್ಚಾಗಿ ಆರ್ಥಿಕತೆ ಎಂಬುದು ಸಾರ್ಥಕತೆ ಇಲ್ಲದಂತಾಗುತ್ತದೆ ಎಂದು ಹೇಳಿದರು