ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.) ವತಿಯಿಂದ ಉಡುಪಿ ತಾಲೂಕಿನ ಮಣಿಪಾಲ ವಲಯದ ಮಂಚಿ ಕುಮೇರಿಯ ಮಾಶಾಸನ ಫಲಾನುಭವಿ ಪ್ರಮೀಳಾ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ನಡೆಯಿತು.
ಪ್ರಮೀಳಾ ಅವರು ಅತ್ಯಂತ ಸಂಕಷ್ಟದಲ್ಲಿದ್ದು ಯೋಜನೆಯ ವತಿಯಿಂದ ಪ್ರತೀ ತಿಂಗಳು ರೂ.1,000 ಮಾಶಾಸನ ಹಾಗೂ ‘ವಾತ್ಸಲ್ಯ’ ಆಹಾರ ಮಿಕ್ಸ್ ಪಡೆಯುತ್ತಿದ್ದರು.
ಪ್ರಮೀಳಾ ಅವರಿಗೆ ವಾಸಿಸಲು ಯೋಗ್ಯವಾದ ಮನೆ ಇಲ್ಲದೇ ಇರುವುದನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ವಾತ್ಸಲ್ಯ ಮನೆ’ಯನ್ನು ನಿರ್ಮಿಸಿ ಕೊಡಲಾಗಿದೆ. ಉಡುಪಿ ನಗರ ಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ‘ವಾತ್ಸಲ್ಯ ಮನೆ’ಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.
ಉಡುಪಿ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ನಗರಸಭಾ ಸದಸ್ಯ ಅಶೋಕ್ ನಾಯ್ಕ್, ತಾಲೂಕು ಯೋಜನಾಧಿಕಾರಿ ರಾಮ.ಎಮ್., ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯ ಕುಶಲ್ ಶೆಟ್ಟಿ ಶುಭ ಹಾರೈಸಿದರು
ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕ್ಯಾಪ್ಟನ್ ಹರೀಶ್, ಮಣಿಪಾಲ ವಲಯ ಅಧ್ಯಕ್ಷ ಸಾವಿತ್ರಿ, ಹೆರ್ಗ’ಬಿ’ ಒಕ್ಕೂಟದ ಅಧ್ಯಕ್ಷೆ ಸುಮಲತಾ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮಣಿಪಾಲ ವಲಯದ ಸದಸ್ಯರು, ಒಕ್ಕೂಟದ ಸಂಘಗಳ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಸ್ವಾಗತಿಸಿದರು. ಹೆರ್ಗ’ಬಿ’ ಸೇವಾ ಪ್ರತಿನಿಧಿ ಚಂದ್ರಕಲಾ ವಂದಿಸಿದರು.