ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಲಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಕೊಡ್ಲಿ ಜನರ ಹಲವಾರು ವರ್ಷಗಳ ಜನರ ಬೇಡಿಕೆಯಾದ ರಿಂಗ್ ರೋಡ್ ಕಾಮಗಾರಿ ಬರದಿಂದ ಸಾಗುತ್ತಿದ್ದು, ಮುಖ್ಯವಾಗಿ ಜನರ ಸಂಪರ್ಕದ ಕೊಂಡಿ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮನೆ ಇರುವಂತಹ ಕಡೆಗಳಲ್ಲಿ ಮೂಲ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಿಂಗ್ ರೋಡ್ ಅವಶ್ಯಕವಾಗಿದ್ದು ಇದರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದರು