ಕೋಟ: ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಸಹಕಾರದೊಂದಿಗೆ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ.೫ರ ಭಾನುವಾರ ಬೆಳಿಗ್ಗೆ ೯.೦೦ ರಿಂದ ಮಧ್ಯಾಹ್ನ – ೧.೦೦ ಗಂಟೆಯವರೆಗೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಜ್ಞಾನ ಮಂದಿರ ಇಲ್ಲಿ ಜರಗಲಿದೆ.ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.