ಕುಂದಾಪುರ : ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ದ್ವಿತೀಯ ಎಂಕಾA ವಿದ್ಯಾರ್ಥಿನಿಯರಾದ ಕು|ರಚನಾ, ಕು|ಶಾಂತಿ ಮತ್ತು ಕು|ಪವಿತ್ರ ಇವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರು ನಡೆಸಿದ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿನಿಯರು ತಮ್ಮ ಬೌದ್ಧಿಕ ಶಕ್ತಿಯ ಮೂಲಕ ಈ ಮಹಾವಿದ್ಯಾಲಯದ ಕೀರ್ತಿಗೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವೃಂದ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಅವರ ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸುಗಳಿಸಲು ಶುಭಾಶಯಗಳನ್ನು ತಿಳಿಸಿದ್ದಾರೆ.