ಕೋಟ : ಶ್ರೀ ಗುರು ನರಸಿಂಹ ಬಿಲಿಯನ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಸಾಲಿಗ್ರಾಮ ಅಂಗ ಸಂಸ್ಥೆಯ ವ್ಯಾಪ್ತಿಯ ಆಯ್ದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು ಈ ಹಿನ್ನಲ್ಲೆಯಲ್ಲಿ ಆಯ್ದ ೫೮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಇತ್ತೀಚೆಗೆ ಸಾಲಿಗ್ರಾಮದ ದೇವಸ್ಥಾನದ ಕೂಟ ಬಂಧು ಭವನದಲ್ಲಿ ನಡೆಯಿತು.
ಇದೇ ವೇಳೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕöÈತ ಕೆ. ತಾರಾನಾಥ ಹೊಳ್ಳ ಮತ್ತು ರಾಜ್ಯ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ಮಾ. ಧೀರಜ್ ಐತಾಳ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಅಧ್ಯಕ್ಷ ಪಿ.ಸಿ .ಹೊಳ್ಳ ವಹಿಸಿದ್ದರು.
ಕಾರ್ಯಕ್ರಮವನ್ನು ಶ್ರೀ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷ ಡಾ.ಕೆ ಎಸ್. ಕಾರಂತ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೂಟಮಹಾ ಜಗತ್ತಿನ ಪ್ರಧಾನ ಕಾರ್ಯದರ್ಶಿ ಸಿ. ಸುರೇಶ್ ತುಂಗ ಬಿಲಿಯನ್ ಫೌಂಡೇಶನ್ ಉದ್ದೇಶ ಮತ್ತು ಕಾರ್ಯ ವಿವರಿಸಿದರು. ಬಿಲಿಯನ್ ಫೌಂಡೇಶನ್ ಪ್ರತಿನಿಧಿ ಸುಬ್ರಹ್ಮಣ್ಯ ಹೇರ್ಳೆ, ಫಲಾನುಭವಿಗಳ ಪಟ್ಟಿಯನ್ನು ವಾಚಿಸಿದರು . ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನಾ ಪತ್ರಗಳನ್ನು ಪಿ. ಮಂಜುನಾಥ ಉಪಾಧ್ಯ ವಾಚಿಸಿದರು. ಕಾರ್ಯದರ್ಶಿ ಮಹಾಬಲ ಹೇರ್ಳೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಚಿದಾನಂದ ತುಂಗ ವಂದನಾರ್ಪಣೆ ಮಾಡಿದರು .ಕೋಶಾಧಿಕಾರಿ ನಾಗರಾಜ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು.