ಮಂಗಳೂರು : ಮಂಗಳೂರು ನಗರದ ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ನ ಮಾಲೀಕನಿಗೆ 58 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.
ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ನಲ್ಲಿ ಕಳೆದ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತನು ಈ ಕೃತ್ಯವನ್ನು ಎಸಗಿದ್ದಾನೆ.
ಈತನು ಬಂಕ್ನ ಹಣಕಾಸು ವ್ಯವಹಾರ ನಿರ್ವಹಣೆ ಮಾಡಿಕೊಳ್ಳುತ್ತಿದ್ದ ಆರೋಪಿಯು 2023 ಮಾರ್ಚ್ 1 ರಿಂದ 2023 ಜುಲೈ 31ರವರೆಗೆ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ನಲ್ಲಿ ಬಂಕಿನ ಕ್ಯೂಆರ್ ಕೋಡ್ ತೆಗೆದು ತನ್ನ ವೈಯಕ್ತಿಕ ಖಾತೆಯ ಕ್ಯೂಆರ್ ಕೋಡ್ ಹಾಕಿದ್ದನು.
ಗ್ರಾಹಕರು ಬಂಕ್ ಕ್ಯೂಆರ್ ಕೋಡ್ ಎಂದು ನಂಬಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಟ್ಟಾರ ಶಾಖೆಗೆ ಹಣ ಜಮೆ ಮಾಡುತ್ತಿದ್ದರು. ಹೀಗೆ ಖಾತೆಗೆ ಒಟ್ಟು 58,85,333ರೂ ಹಣವನ್ನು ವರ್ಗಾಯಿಸಿಕೊಂಡಿದ್ದಾನೆ
ಈ ರೀತಿ ಜಮೆ ಮಾಡಿಕೊಂಡು ನಂಬಿಕೆ ದ್ರೋಹ ಎಸಗಿದ್ದಾನೆ ಎಂದು ಮಂಗಳೂರು ಸೆನ್ ಠಾಣೆಯಲ್ಲಿ ಆರೋಪಿ ವಿರುದ್ಧ ರಿಲಯನ್ಸ್ ಕಂಪನಿ ಮ್ಯಾನೇಜರ್ ಸಂತೋಷ್ ಮ್ಯಾಥ್ಯ ದೂರು ನೀಡಿದ್ದು ಮೋಹನದಾಸನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.