ಬೆಂಗಳೂರು : 2024-25ನೇ ಸಾಲಿನ ಎಸ್ಎಸ್ ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಮಾ.1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಮೊದಲ ಹಂತದ ಪರೀಕ್ಷೆ ಮಾ.21ರಿಂದ ಏ.4ರವರೆಗೆ ನಡೆಯಲಿದೆ. ಹೀಗಾಗಿ ರಾಜ್ಯದ ಎಲ್ಲ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.