Home » ಶರಣಾಗತ ನಕ್ಸಲರ ಶಸ್ತ್ರ ಪತ್ತೆ ಕಾರ್ಯ ಆರಂಭ
 

ಶರಣಾಗತ ನಕ್ಸಲರ ಶಸ್ತ್ರ ಪತ್ತೆ ಕಾರ್ಯ ಆರಂಭ

by Kundapur Xpress
Spread the love

ಬೆಂಗಳೂರು : ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಇಟ್ಟಿದ್ದಾರೆಂಬುದನ್ನು ನೆರವು ಪಡೆದು ಹುಡುಕುತ್ತಾರೆ.

ಇದಕ್ಕೆಲ್ಲ ಪ್ರಕ್ರಿಯೆ ಇದೆ ಅದರ ಅನುಸಾರ ಪೊಲೀಸರು ಕೆಲಸ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ ? ಅವರು ಕೂಡ ಸರ್ಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ ಎಂದು ತಿರುಗೇಟು ನೀಡಿದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾ ವಹಿಸಲದ್ದೇವೆ ಎಂದು ಹೇಳಿದರು.

ಎನ್ ಕೌಂಟರ್ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಾಗಿದೆ ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಬೇರೆ ಎಂದರು.

 

Related Articles

error: Content is protected !!