ಕುಂದಾಪುರ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಂದಾಪುರ ವಲಯದ 10ನೇ ತರಗತಿ ಮಕ್ಕಳಿಗೆ ಆಯೋಜಿಸಿರುವ ಪ್ರೇರಣಾ ಶಿಬಿರ ಸಮಯೋಚಿತ. ಇದರಿಂದ ಮಕ್ಕಳು ಪರೀಕ್ಷೆ ಎದುರಿಸಲು ಅನುಕೂಲವಾಗುತ್ತದೆ ಎಂದು ಹೊಂಬಾಡಿ- ಮಂಡಾಡಿ ಗ್ರಾಮ ಪಂಚಾಯಿತಿ ಉಪಾ ಧ್ಯಕ್ಷ ಅರುಣ್ ಕುಮಾರ ಹೆಗ್ಡೆ ಹೇಳಿದರು.
ಶುಕ್ರವಾರ ಬೆಳಗ್ಗೆ ಸುಣ್ಣಾರಿ ಎಕ್ಸಲೆಂಟ್ ವಿದ್ಯಾಲಯದ ವಠಾರದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕಿನ 10ನೇ ತರಗತಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಸುಣ್ಣಾರಿ ಎಕ್ಸಲೆಂಟ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸರೋಜಿನಿ ಆಚಾರ್ಯ ವಂದಿಸಿದರು