ಕೋಟ: ಉಡುಪಿ ಜಿಲ್ಲಾ ಪೊಲೀಸ್ ಉಪವಿಭಾಗ ಹಾಗೂ ಬ್ರಹ್ಮಾವರ ವೃತ್ತ,ಕೋಟ ಪೊಲೀಸ್ ಠಾಣೆ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಾದ ನೇತ್ರಾಲಯ ಉಡುಪಿ ಇವರ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ ಇವರ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವು ಇಂದು ಬೆಳಿಗ್ಗೆ 10.00 ಗಂಟೆಗೆ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ ಅಲ್ಲದೆ ರಸ್ತೆ ಸುರಕ್ಷಾ ಜಾಗೃತಿಯ ಅಂಗವಾಗಿ ಕೋಟ ಅಮೃತೇಶ್ವರಿ ಸರ್ಕಲ್ ಬಳಿಯಿಂದ ಜಾಗೃತಿ ಜಾಥ ನಡೆಯಲಿದೆ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.