ಕನ್ನಡ ಯುವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಸುನಿಲ್ ಅವರ ನೇತೃತ್ವದಲ್ಲಿ. ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷರಾದ ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಯುವ ಘಟಕದ ವತಿಯಿಂದ ರಾಜ್ಯ ಕಾರ್ಮಿಕರ ಘಟಕದ ಉಪಾಧ್ಯಕ್ಷರಾದ ಶ್ರೀಯುತ ನಾಗೇಶ್ ರವರ ಹುಟ್ಟು ಹಬ್ಬವನ್ನು ಬುದ್ಧಿಮಾಂದ್ಯ ಮಕ್ಕಳ ಜೊತೆ ಆಚರಿಸಲಾಯಿತು ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದು…ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷರು ಹೇಮಂತ್ ಕುಮಾರ್ ಹಾಗೂ ರಾಜ್ಯ ಪ್ರಚಾರ ಸಮಿತಿಯ ಕಾರ್ಯದರ್ಶಿ ಸಂದೀಪ್ ಹಾಗೂ ರಾಜ್ಯ ಕಾರ್ಮಿಕರ ಘಟಕದ ಉಪಾಧ್ಯಕ್ಷರು ನಾಗೇಶ್ ಹಾಗೂ ಉಡುಪಿ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್ ಸುವರ್ಣ ಅವರು ಹಾಗೂ ಉಡುಪಿ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರು ಪ್ರವೀಣ್ ದಿಕ್ರೋಝ್ ಹಾಗೂ ಜಿಲ್ಲಾ ಘಟಕದ ಉಪಾಧ್ಯಕ್ಷರು ಪ್ರಶಾಂತ್ ಹಾಗೂ ಯುವ ಘಟಕದ ಸದಸ್ಯರು ಮಂಜುನಾಥ್ ಮತ್ತು ತಿಪ್ಪಣ್ಣ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.