Home » ಮೇ 3ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ
 

ಮೇ 3ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

by Kundapur Xpress
Spread the love

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,900 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2025ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಸಂಪರ್ಕಿಸಿ: ದೂ.08256-266644, 9663464648, 8147263422

 

Related Articles

error: Content is protected !!