ನವದೆಹಲಿ : ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಕಾಂಗ್ರೆಸ್ನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ ‘ಭಾಗವತ್ರದ್ದು ದೇಶದ್ರೋಹದ ಹೇಳಿಕೆ ಇದು ಭಾರತೀಯರಿಗೆ ಮಾಡಿದ ಅವಮಾನ ಇಂಥ ಹೇಳಿಕೆ ಮೂಲಕ ಅವರು ಸಂವಿಧಾನ ಹಾಗೂ ಬ್ರಿಟಿಷರ ವಿರುದ್ಧದ ಹೋರಾಟ ವನ್ನು ಅಮಾನ್ಯ ಎಂದಂತಾಯಿತು. ಇಂಥವುಗಳಿಗೆ ಕಿವಿಗೊಡಬಾರದು’ ಎಂದ ರಾಹುಲ್, ಅನ್ನಿಸಿದ್ದನ್ನು ಹೇಳುವ ದಿಟ್ಟತನ ಭಾಗವರಿಗಿದೆ. ಬೇರೆ ದೇಶದಲ್ಲಾಗಿದ್ದರೆ ಅವರನ್ನು ಬಂಧಿಸಲಾಗುತ್ತಿತ್ತು ಎಂದರು