ಕೋಟ : ಇಲ್ಲಿನ ಕೋಟದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಎಸ್. ಬಂಗಾರಪ್ಪ ಸಭಾಭವನದ ಉದ್ಘಾಟನೆಯ ಸಂದರ್ಭ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಕೃಷಿ ನೇಗಿಲು ನೀಡಿ ಸನ್ಮಾನಿಸಿ, ಗೌರವಿಸ ಲಾಯಿತು. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ರಾಷ್ಟ್ರೀಕೃತ ಬ್ಯಾಂಕ್‌ಗಳ ಕಟ್ಟಡಕ್ಕಿಂತಲೂ ಚೆನ್ನಾಗಿ ನಿರ್ಮಿಸಲಾಗಿದೆ. ಈ ಕಟ್ಟಡಕ್ಕೆ ಹಿರಿಯರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಲಿಪ್ಪನ್ನು ಅಳವಡಿಸಲು ನಾನು 10 ಲಕ್ಷ ರೂ. ನೀಡುತ್ತೇನೆ ಎಂದರು. ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಕೊರಗ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಚಿವ ಕೆ. ಎನ್. ರಾಜಣ್ಣ ಸಂಸದ ಕೆ.ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಕೆ. ಜಯ ಪ್ರಕಾಶ್ ಹೆಗ್ಡೆ, ಶಾಸಕ ಕಿರಣ್ ಕುಮಾರ್ ಕೊಡ್ಡಿ, ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಜಗದೀಶ್ ಕೆಮ್ಮಣ್ಣು ಮತ್ತಿತರರು ಉಪಸ್ಥಿತರಿದ್ದರು.