ಉಳ್ಳಾಲ : ಎಟಿಎಂಗೆ ಹಣ ತುಂಬಿಸುವ ವಾಹನ ಸಿಬ್ಬಂದಿಯನ್ನು ಹಾಡಹಗಲೇ ಶೂಟ್ ಮಾಡಿ ಹಣ ಸಮೇತ ಪರಾರಿಯಾದ ಘಟನೆ ಬೀದರ್‌ನಲ್ಲಿ ನಡೆದ ಮಾರನೇ ದಿನವೇ ಮಂಗಳೂರು ಸಮೀಪದ ಉಳ್ಳಾಲದಲ್ಲಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆ ನಡೆದಿದೆ
ಶುಕ್ರವಾರ ಮಧ್ಯಾಹ್ನದ ವೇಳೆ ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕೋಟೆಕಾರ್ ಸೇವಾ ಸಹಕಾರಿ ಸಂಘದ ಬ್ಯಾಂಕ್ ಗೆ ನುಗ್ಗಿದ 5 ಮಂದಿ ಮುಸುಕುಧಾರಿ ದರೋಡೆಕೋರರ ತಂಡ, ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲು ಮತ್ತು ತಲವಾರು ತೋರಿಸಿ ಅಂದಾಜು 12 ಕೋಟಿ ರು. ಮೌಲ್ಯದ ಚಿನ್ನಾಭರಣ ಹಾಗೂ 5 ಲಕ್ಷ ರು. ನಗದು ದೋಚಿ ಪರಾರಿಯಾಗಿದೆ. ಕೇವಲ 5 ನಿಮಿಷಗಳ ಅವಧಿಯಲ್ಲಿ ನಡೆದ ಈ ದರೋಡೆ ರಾಜ್ಯದಲ್ಲಿ ಈವರೆಗೆ ನಡೆದ ಅತಿ ದೊಡ್ಡ ಮೊತ್ತದ ಬ್ಯಾಂಕ್ ದರೋಡೆ ಎನ್ನಲಾಗಿದೆ
ದರೋಡೆ ನಡೆಸಿದ ತಂಡ, ಗೋಣಿ ಚೀಲದಲ್ಲಿ ಚಿನ್ನ, ಹಣ ತುಂಬಿಕೊಂಡು, ಫಿಯೆಟ್ ಲಿನಿಯಾ ಕಾರಿನಲ್ಲಿ ಪರಾರಿಯಾಗಿದೆ. 5 ದುಷ್ಕರ್ಮಿಗಳ ತಂಡ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು ಅವರ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.