ಬೆಂಗಳೂರು : ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದರು. ಅವರನ್ನು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸ್ವಾಗತಿಸಿದರು
ಈ ಸಂದರ್ಭದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು