ಮಂಗಳೂರು : ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೈನಲ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲ್ ಕೃಷ್ಣಭಟ್ ಅವರು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿ ಎ ಪದವೀಧರರಿಗೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ ಅವರು “ಹೊಸ ವಿಷಯಗಳ ಕಲಿಕೆ ಜೀವನದ ಭಾಗವಾಗಿದೆ. ಲೆಕ್ಕಪರಿಶೋಧಕರು ವೃತ್ತಿಯ ಜೊತೆಗೆ ಆಸಕ್ತಿದಾಯಕ ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳಬಹುದು” ಎಂದು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.
ವಿದ್ಯಾರ್ಥಿಗಳನ್ನು ಹೆತ್ತವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ್ ಕಾಮತ್, ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆ ಶ್ರೀಮತಿ ಯಶಸ್ವಿನಿ ಯಶ್ ಪಾಲ್, ತ್ರಿಶಾ ಕ್ಲಾಸಸ್ ಭೋಧಕರದ ಸಿಎ ಆದರ್ಶ ಶೆಣೈ , ತ್ರಿಶಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸುಮಾರು 100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಆಶಿತಾ ಸ್ವಾಗತಿಸಿ, ಐರೆಲ್ ನಿರೂಪಿಸಿ, ಪೂಜಾ ವಂದಿಸಿದರು.