ಹೊಸದಿಲ್ಲಿ : ಆಕಾಶವಾಣಿಯ ಮಾಸಿಕ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 11.00 ಗಂಟೆಗೆ ದೇಶ-ವಿದೇಶಗಳಲ್ಲಿರುವ ಭಾರತೀಯರೊಂದಿಗೆ ತಮ್ಮ ಮನದ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಮನ್ ಕಿ ಬಾತ್ ಕಾರ್ಯಕ್ರಮದ 118ನೇ ಆವೃತ್ತಿಯಾಗಿದ್ದು, ಕಾರ್ಯಕ್ರಮ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಪ್ರಸಾರಗೊಳ್ಳಲಿದೆ. ಅಲ್ಲದೆ ಪ್ರಧಾನಮಂತ್ರಿ ಕಾರ್ಯಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ವಾಹಿನಿಗಳಲ್ಲಿ ನೇರ ಪ್ರಸಾರವಾಗಲಿದೆ. ಹಿಂದಿ ಅವತರಣಿಕೆಯ ನಂತರ ಪ್ರಾದೇಶಿಕ ಭಾಷೆಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.