ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಆರ್‌ಐಡಿಎಫ್ ಟ್ರಾಂಚ್ 30 ರಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾಗಿ ಹೊಸ ಕಟ್ಟಡ ಮಂಜೂರಾತಿಗೆ ಶಾಸಕರು ಮನವಿ ಮಾಡಿದ್ದರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಚರ್ಚೆ ನಡೆಸಿದ್ದರು.
ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣದಿಂದ ಸಮರ್ಪಕ ವಸತಿ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ. ಬೈಂದೂರು ತಾಲೂಕು ಯಡ್ತರೆ ಗ್ರಾಮದ ಸರ್ವೇ ನಂಬ್ರ 263/1ಪಿ 1 ರಲ್ಲಿ 0.22 ಎಕ್ರೆ ಜಮೀನನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಉದ್ದೇಶಕ್ಕಾಗಿ ಈಗಾಗಲೇ ಇಲಾಖಾ ಹೆಸರಿಗೆ ಕಾಯ್ದಿರಿಸಲಾಗಿದೆ.