ಕಾಪು : ಪುನರ್ ನಿರ್ಮಾಣಗೊಳ್ಳುತ್ತಿರುವ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಕ್ಷೇತ್ರದಲ್ಲಿ ಐತಿಹಾಸಿಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಹಸಿರು ಹೊರೆ ಕಾಣಿಕೆ, ಸ್ವರ್ಣ ಗದ್ದುಗೆ, ರಜತ ರಥ ಹಾಗೂ ಸ್ವರ್ಣ ಮುಖದ ಬೃಹತ್ ಮೆರವಣಿಗೆಯನ್ನು ಆಯೋಜಿಸುವ ಕುರಿತು ದಿನಾಂಕ 19-01-2025 ರಂದು ನಡೆದ “ಸಮಾಲೋಚನಾ ಸಭೆ”ಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.