ಮಹಾಕುಂಭ ನಗರ : ಸಿಲಿಂಡರ್ ಸ್ಫೋಟದಿಂದಾಗಿ ಭಾನುವಾರ ಮಹಾ ಕುಂಭಮೇಳದಲ್ಲಿ ಬೆಂಕಿ ಕಾಣಿಸಿಕೊಂಡು, ಸೆಕ್ಟರ್ 19ರಲ್ಲಿ 18 ಡೇರೆಗಳನ್ನು ಬೆಂಕಿ ಆವರಿಸಿದ ಘಟನೆ ನಡೆದಿದೆ. ಆದರೆ ಯಾವುದೇ ಸಾವುನೋವು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ
ಕುಂಭಮೇಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರಮೋದ್ ಶರ್ಮಾ ಮಾತನಾಡಿ, 18 ಡೇರೆಗಳನ್ನು ಆವರಿಸಿರುವ ಬೆಂಕಿಯನ್ನು ನಂದಿಸಲು 15 ಅಗ್ನಿಶಾಮಕ ವಾಹನಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು.