ವಾಷಿಂಗ್ಟನ್ : ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಿದರು. ವಾಷಿಂಗ್ಟನ್ ಡಿಸಿಯಲ್ಲಿನ ಯುಎಸ್ ಕಾಪಿಟೊಲ್ ನಲ್ಲಿ ನಡೆದ ಸಮಾರಂಭದಲ್ಲಿ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷರ ಪ್ರಮಾಣವಚನ ನಡೆಯಿತು. ಪ್ರಮಾಣವಚನ ಸಮಾರಂಭವು ಭಾರತೀಯ ಕಾಲಮಾನ ಸೋಮವಾರ ರಾತ್ರಿ 10.30ಕ್ಕೆ ಪ್ರಾರಂಭವಾಯಿತು. ಅಮೆರಿಕದ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣವಚನ ಸ್ವೀಕರಿಸಿದರು.
ಹಲವಾರು ವಿದೇಶಿ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಅವರು ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದರು. ಅರ್ಜೆಂಟೀನಾ ಅಧ್ಯಕ್ಷ ಜೀವಿಯರ್ ಮಿಲಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ದೇಶ-ವಿದೇಶಗಳ ಹಲವು ಗಣ್ಯರು ಪಾಲ್ಗೊಂಡಿದ್ದರು.