ಹಾಲಾಡಿ:: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಹೆಗ್ಡೆಕೆರೆ ಹಳ್ಳಾಡಿಯ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಕಲ ವಿಧಿ ವಿಧಾನಗಳ ಧಾರ್ಮಿಕ ಅನುಸಂಧಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು