ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷ ಗಾದಿಗೇರುತ್ತಿದ್ದಂತೆ ಅಮೆರಿಕದಲ್ಲಿರುವ ಭಾರತೀಯರು ಆದಷ್ಟು ಬೇಗ ಮಕ್ಕಳನ್ನು ಹೆರಲು ಹವಣಿಸುತ್ತಿದ್ದಾರೆ ಇದಕ್ಕೆ ಕಾರಣ ಟ್ರಂಪ್ರ ‘ಜನ್ಮಸಿದ್ದ ಪೌರತ್ವ ಹಕ್ಕು’ ರದ್ದತಿ ನಿರ್ಧಾರ !
ಹೌದು…. ಅಮೆರಿಕದಲ್ಲಿ ಜನಿಸುವ ವಿದೇಶಿ ಪ್ರಜೆಗಳ ಮಕ್ಕಳಿಗೆ ಸ್ವಾಭಾವಿಕವಾಗಿ ದೊರೆಯುತ್ತಿದ್ದ ಅಮೆರಿಕದ ಪೌರತ್ವವನ್ನು ರದ್ದುಪಡಿಸುವ ಆದೇಶಕ್ಕೆ ಟ್ರಂಪ್ ಸಹಿ ಮಾಡಿದ್ದು ಇದು ಫೆ.20ರಿಂದ ಜಾರಿಗೆ ಬರಲಿದೆ. ಆದ್ದರಿಂದ ಫೆ.19ಕ್ಕೂ (ಅಮೆರಿಕ ಕಾಲಮಾನ ಫೆ.19ರ ಮಧ್ಯರಾತ್ರಿ 12.00ರೊಳಗೆ) ಮೊದಲೇ ಮಕ್ಕಳನ್ನು ಹೆತ್ತರೆ. ಅವರು ಅಮೆರಿಕದ ಪ್ರಜೆಯಾಗುತ್ತಾರೆ ಎಂಬ ಆಸೆಯೊಂದಿಗೆ ದಂಪತಿಗಳು ಸಿಸೇರಿಯನ್ ಮೂಲಕ ಅವಧಿಗೂ ಮೊದಲೇ ಮಗುವಿಗೆ ಜನ್ಮ ನೀಡಲು ಮುಂದಾಗಿದ್ದಾರೆ ಎಂದು ಅಮೇರಿಕದ ವೈದ್ಯರೊಬ್ಬರು ತಿಳಿಸಿದ್ದಾರೆ