Home » ಮಹಾ ಕುಂಭಮೇಳದಲ್ಲಿ ಕಾಲ್ತುಳಿತ : 30 ಸಾವು
 

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ : 30 ಸಾವು

60 ಜನರಿಗೆ ಗಾಯ, ತಪ್ಪಿದ ಭಾರಿ ಅನಾಹುತ

by Kundapur Xpress
Spread the love

ಮಹಾಕುಂಭನಗರ : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭಮೇಳದಲ್ಲಿ ಬುಧವಾರ ದುರ್ಘಟನೆಯೊಂದು ಸಂಭವಿಸಿದೆ. ಪವಿತ್ರ ಮೌನಿ ಅಮಾವಾಸ್ಯೆ ದಿನ ಪುಣ್ಯಸ್ನಾನಕ್ಕಾಗಿ ನೆರೆದಿದ್ದ ಕೋಟ್ಯಂತರ ಜನರ ಪೈಕಿ ಲಕ್ಷಾಂತರ ಜನರು ಏಕಾಏಕಿ ನದಿಯತ್ತ ನುಗ್ಗಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕರ್ನಾಟಕ ಬೆಳಗಾವಿಯ ನಾಲ್ವರು ಸೇರಿದಂತೆ ಒಟ್ಟು 30 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡಿದ್ದಾರೆ.

ಘಟನೆ ಕುರಿತು ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಗಣ್ಯರು ಕಂಬನಿ ಮಿಡಿದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆಗೆ ಉತ್ತರಪ್ರದೇಶ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರು. ಪರಿಹಾರ ಪ್ರಕಟಿಸಿದೆ.

ಈ ನಡುವೆ ಕೋಟ್ಯಂತರ ಜನರು ಸೇರಿದ್ದ ಕಾರ್ಯಕ್ರಮದ ವೇಳೆ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದರೂ, ಸ್ಥಳದಲ್ಲಿ ಉತ್ತರಪ್ರದೇಶ ಸರ್ಕಾರದ ಮುಂಜಾಗ್ರತಾ ಕ್ರಮದಿಂದಾಗಿ ಘೋರ ದುರಂತ ತಪ್ಪಿದೆ

 

Related Articles

error: Content is protected !!