ನವದೆಹಲಿ : ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ಈಡೇರಿಸುವಂತಹ ಜನರ ಬಜೆಟ್ ಇದು. ಆಯವ್ಯಯಗಳು ಸಾಮಾನ್ಯವಾಗಿ ಸರ್ಕಾರದ ಬೊಕ್ಕಸ ತುಂಬಲು ನೋಡುತ್ತವೆ. ಆದರೆ ಈ ಬಾರಿಯ ಬಜೆಟ್ ಜನರ ಜೇಬಿನಲ್ಲಿ ಹೆಚ್ಚು ಹಣ ಇಡುವ ಹಾಗೂ ಅವರ ಉಳಿತಾಯ ಹೆಚ್ಚಿಸುವ ಉದ್ದೇಶ ಹೊಂದಿದೆ. ಭಾರತದ ಅಭಿವೃದ್ಧಿ ಯಾನದಲ್ಲಿ ಜನರನ್ನು ಪಾಲುದಾರರನ್ನಾಗಿಸುವ ಗುರಿ ಹೊಂದಿದೆ. ಇದು ಅಭಿವೃದ್ಧಿಯ ಹಾದಿಯಲ್ಲಿ ಐತಿಹಾಸಿಕ ಹಾಗೂ ಮಹತ್ತರ ಮೈಲುಗಲ್ಲು.