Home » ಅಂಗನವಾಡಿ ಪುಟಾಣಿಗಳಿಗೆ ಸ್ಥಳೀಯಾಡಳಿತದಿಂದ ಅಭಿನಂದನೆ
 

ಅಂಗನವಾಡಿ ಪುಟಾಣಿಗಳಿಗೆ ಸ್ಥಳೀಯಾಡಳಿತದಿಂದ ಅಭಿನಂದನೆ

ಕ್ರೀಡೆಯಲ್ಲಿ ಸಾಧನೆ

by Kundapur Xpress
Spread the love

ಕೋಟ : ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚಿಗೆ ಕೋಟ ಮಣೂರು ಪಡುಕರೆಯಲ್ಲಿ ಗೀತಾನಂದ ಪೌಂಡೇಶನ್ ವತಿಯಿಂದ ನಡೆಸಲಾದ ವಲಯ ಮಟ್ಟದ ಮಕ್ಕಳ ಕ್ರೀಡಾಕೂಟ ಮಕ್ಕಳಾಟ ವಿವಿಧ ಕ್ರೀಡೆಗಳಲ್ಲಿ ವಿಜೇತರಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಪುಟಾಣಿಗಳನ್ನು ಗ್ರಾಮ ಪಂಚಾಯತ್ ಕೋಟತಟ್ಟು, ಕಾರಂತ ಪ್ರತಿಷ್ಠಾನ ಕೋಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಇವರ ವತಿಯಿಂದ ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ವಹಿಸಿ ಮಾತನಾಡಿದ ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಾದರಿಯಾಗಿವೆ ಎಳವೆಯಲ್ಲಿಯೇ ಈ ಮಕ್ಕಳ ಸಾಧನೆ ಮೆಚ್ಚುವಂತದ್ದು ಎಂದು ಅಧ್ಯಕ್ಷೀಯ ಮಾತುಗಳನ್ನಾಡಿದರು.
ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್, ಅಂಗನವಾಡಿ ಮೇಲ್ವಿಚಾರಕಿ ಲಕ್ಷಿ÷್ಮ ಸ್ಪರ್ಧೆಯಲ್ಲಿ ಭಾಗಿಯಾದ ಪುಟಾಣಿಗಳಿಗೆ ಶುಭ ಹಾರೈಸಿದರು.
ವಿಜೇತರಾದ ಮಕ್ಕಳಿಗೆ ಅತಿಥಿಗಳಿಂದ ಬಹುಮಾನವನ್ನು ನೀಡಲಾಯಿತು. ಈ ಸಂದರ್ಭ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಉಡುಗೊರೆ ಹಾಗೂ ಸಿಹಿ ತಿಂಡಿಗಳನ್ನು ನೀಡಲಾಯಿತು.
ಇದೇ ವೇಳೆ ಎಳೆಯ ಮಕ್ಕಳಲ್ಲಿ ಕ್ರೀಡಾಮನೋಭಾವ ಬೆಳೆಸುವಲ್ಲಿ ಶ್ರಮಿಸಿದ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಮತ್ತು ಸಹಾಯಕಿ ಶೈಲಜ ಇವರುಗಳನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀನಿರೂಪಿಸಿದರು.

 

Related Articles

error: Content is protected !!